Zechariah · chapter 8 · verse 13
Zechariah 8:13 in Kannada
ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.
Aaguvadenandare, o yehoodada manetanadavare, israayelina manetanadavare, neevu janaangagalalli shaapavaagidda prakaara naanu nimmannu rakshisuvenu mattu neevu aasheervaadavaagiruviri; bhayapadabediri; nimma kaigalu balavaagirali.
Zechariah 8:13 in English
- King James Version (KJV)
- And it shall come to pass, [that] as ye were a curse among the heathen, O house of Judah, and house of Israel; so will I save you, and ye shall be a blessing: fear not, [but] let your hands be strong.
- World English Bible (WEB)
- It shall come to pass that, as you were a curse among the nations, house of Judah and house of Israel, so I will save you, and you shall be a blessing. Don’t be afraid. Let your hands be strong.”
- American Standard Version (ASV)
- And it shall come to pass that, as ye were a curse among the nations, O house of Judah and house of Israel, so will I save you, and ye shall be a blessing. Fear not, [but] let your hands be strong.
- Bible in Basic English (BBE)
- And it will come about that, as you were a curse among the nations, O children of Judah and children of Israel, so I will give you salvation and you will be a blessing: have no fear and let your hands be strong.
- Darby Translation (DBY)
- And it shall come to pass, like as ye were a curse among the nations, O house of Judah and house of Israel, so will I save you, and ye shall be a blessing: fear ye not, let your hands be strong.
- Webster's Bible (WBS)
- And it shall come to pass, [that] as ye were a curse among the heathen, O house of Judah, and house of Israel; so will I save you, and ye shall be a blessing: fear not, let your hands be strong.
- Young's Literal Translation (YLT)
- And it hath come to pass, As ye have been a reviling among nations, O house of Judah, and house of Israel, So I save you, and ye have been a blessing, Do not fear, let your hands be strong.
Read in context
- 11ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವದಿಲ್ಲವೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- 12ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
- 13ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.
- 14ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಶಿಕ್ಷಿಸುವದಕ್ಕೆ ಯೋಚಿಸಿದೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ; ನಾನು ಪಶ್ಚಾತ್ತಾಪ ಪಡಲಿಲ್ಲ.
- 15ನಾನು ತಿರುಗಿ ಈ ದಿವಸಗಳಲ್ಲಿ ಯೆರೂಸಲೇಮಿಗೂ ಯೆಹೂದದ ಮನೆತನದವರಿಗೂ ಒಳ್ಳೇದನ್ನು ಮಾಡಲು ಯೋಚಿಸಿದ್ದೇನೆ; ನೀವು ಭಯ ಪಡಬೇಡಿರಿ.
Cross references
- Genesis 12:2–3 ಆದಿಕಾಂಡ 12:2–3ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ. ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
- Psalm 72:17 ಕೀರ್ತನೆಗಳು 72:17ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
- 1 Corinthians 16:13 1 ಕೊರಿಂಥದವರಿಗೆ 16:13ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
- Zephaniah 3:20 ಚೆಫನ್ಯ 3:20ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
- Zechariah 8:9 ಜೆಕರ್ಯ 8:9ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
- Ruth 4:11–12 ರೂತಳು 4:11–12ಇದಕ್ಕೆ ಈ ಹೊತ್ತು ನೀವು ಸಾಕ್ಷಿಗಳಾಗಿದ್ದೀರಿ ಅಂದನು. ಆಗ ಬಾಗಲಲ್ಲಿರುವ ಸಮಸ್ತ ಜನರೂ ಹಿರಿಯರೂ ಹೇಳಿದ್ದೇನಂದರೆ--ನಾವು ಸಾಕ್ಷಿಗಳೇ; ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಕರ್ತನು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡುವ ವನಾಗಲಿ; ಎಫ್ರಾತದಲ್ಲಿ ಯೋಗ್ಯ ಕಾರ್ಯ ಮಾಡು, ಬೇತ್ಲೆಹೇಮಿನಲ್ಲಿ ಹೆಸರುಗೊಂಡವನಾಗಿರು. ಈ ಹುಡುಗಿಯಿಂದ ಕರ್ತನು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯೂ ತಾಮರಳು ಯೂದ ನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ ಅಂದರು.
- Ezekiel 5:15 ಯೆಹೆಜ್ಕೇಲನು 5:15ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ.
- Jeremiah 29:18 ಯೆರೆಮೀಯ 29:18ಕತ್ತಿಯಿಂದಲೂ ಕ್ಷಾಮ ದಿಂದಲೂ ಜಾಡ್ಯದಿಂದಲೂ ಅವರನ್ನು ಹಿಂಸಿಸಿ ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.
- Galatians 3:28–29 ಗಲಾತ್ಯದವರಿಗೆ 3:28–29ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ. ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Zechariah 10:6–9 ಜೆಕರ್ಯ 10:6–9ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು. ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು. ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು. ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.
- Isaiah 35:3–4 ಯೆಶಾಯ 35:3–4ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ. ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- Genesis 26:4 ಆದಿಕಾಂಡ 26:4ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.