Zechariah · chapter 8 · verse 20
Zechariah 8:20 in Kannada
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;
Sainyagala kartanu heege heluttaane--janagaloo aneka pattanagala nivaasigaloo innu baruvaru;
Zechariah 8:20 in English
- King James Version (KJV)
- Thus saith the LORD of hosts; [It shall] yet [come to pass], that there shall come people, and the inhabitants of many cities:
- World English Bible (WEB)
- The LORD of Armies says: “Many peoples and the inhabitants of many cities will yet come.
- American Standard Version (ASV)
- Thus saith Jehovah of hosts: [It shall] yet [come to pass], that there shall come peoples, and the inhabitants of many cities;
- Bible in Basic English (BBE)
- This is what the Lord of armies has said: It will again come about that when peoples and those living in great towns come,
- Darby Translation (DBY)
- Thus saith Jehovah of hosts: Yet again shall there come peoples, and the inhabitants of many cities;
- Webster's Bible (WBS)
- Thus saith the LORD of hosts: [It shall] yet [come to pass] , that there shall come people, and the inhabitants of many cities:
- Young's Literal Translation (YLT)
- Thus said Jehovah of Hosts: Yet come do peoples, and inhabitants of many cities,
Read in context
- 18ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--
- 19ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.
- 20ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;
- 21ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು.
- 22ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
Cross references
- Isaiah 2:2–3 ಯೆಶಾಯ 2:2–3ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು. ಅನೇಕ ಪ್ರಜೆಗಳು ಹೋಗಿ--ಬನ್ನಿರಿ, ಕರ್ತನ ಪರ್ವತಕ್ಕೂ ಯಾಕೋಬನ ದೇವರ ಆಲಯ ಕ್ಕೂ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು; ಚೀಯೋನಿನಿಂದ ನ್ಯಾಯಪ್ರಮಾಣವೂ ಯೆರೂಸಲೇಮಿನಿಂದ ಕರ್ತನ ವಾಕ್ಯವೂ ಹೊರಡುವದು.
- Micah 4:1–2 ಮೀಕ 4:1–2ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು. ಅನೇಕ ಜನಾಂಗಗಳು ಬಂದು ಹೇಳುವ ದೇನಂದರೆ--ಬನ್ನಿರಿ; ಕರ್ತನ ಬೆಟ್ಟಕ್ಕೆ ಯಾಕೋಬಿನ ದೇವರ ಆಲಯಕ್ಕೆ ಹೋಗೋಣ; ಆತನು ತನ್ನ ಮಾರ್ಗಗಳನ್ನು ನಮಗೆ ಬೋಧಿಸುವನು; ನಾವು ಆತನ ಹಾದಿಗಳಲ್ಲಿ ನಡೆಯುವೆವು; ಯಾಕಂದರೆ ಚೀಯೋನಿನೊಳಗಿಂದ ನ್ಯಾಯಪ್ರಮಾಣವೂ ಯೆರೂ ಸಲೇಮಿನೊಳಗಿಂದ ದೇವರ ವಾಕ್ಯವೂ ಹೊರಡು ವದು.
- Zechariah 2:11 ಜೆಕರ್ಯ 2:11ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
- Jeremiah 16:19 ಯೆರೆಮೀಯ 16:19ಓ ಕರ್ತನೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಅನ್ಯರು ನಿನ್ನ ಬಳಿಗೆ ಬಂದು--ನಿಶ್ಚಯ ವಾಗಿ ನಮ್ಮ ತಂದೆಗಳು ಸುಳ್ಳನ್ನು ವ್ಯರ್ಥವನ್ನು ಲಾಭ ವಿಲ್ಲದವುಗಳನ್ನು ಬಾಧ್ಯವಾಗಿ ಹೊಂದಿದ್ದಾರೆ.
- Isaiah 60:3–12 ಯೆಶಾಯ 60:3–12ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು. ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು. ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು. ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ. ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು. ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ. ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು.
- Matthew 8:11 ಮತ್ತಾಯನು 8:11ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Psalm 89:9 ಕೀರ್ತನೆಗಳು 89:9ನೀನು ಸಮುದ್ರದ ಉಬ್ಬರವನ್ನು ಆಳುತ್ತೀ; ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀ.
- 2 Chronicles 6:32–33 2 ಪೂರ್ವಕಾಲವೃತ್ತಾಂತ 6:32–33ನಿನ್ನ ದೊಡ್ಡ ಹೆಸರು, ನಿನ್ನ ಬಲವಾದ ಕೈ, ಚಾಚಿದ ನಿನ್ನ ತೋಳು ಇವುಗಳ ನಿಮಿತ್ತ ನಿನ್ನ ಜನ ವಾದ ಇಸ್ರಾಯೇಲಿನವನಲ್ಲದೆ ದೂರದೇಶದಿಂದ ಬಂದ ಪರದೇಶಸ್ಥರನ್ನು ಕುರಿತು ಏನಂದರೆ, ಅವರು ಬಂದು ಈ ಆಲಯದಲ್ಲಿ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲಿನ ಪ್ರಕಾರ ಭೂಲೋಕ ದಲ್ಲಿರುವ ಸಮಸ್ತರೂ ನಿನಗೆ ಭಯಪಟ್ಟು ನಿನ್ನ ಹೆಸ ರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಆಲಯವು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿತೆಂದು ಅವರು ತಿಳಿಯುವ ಹಾಗೆಯೂ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳಿ ಪರದೇಶಸ್ಥನು ನಿನಗೆ ಬೇಡಿದ ಎಲ್ಲಾದರ ಹಾಗೆ ಅನುಗ್ರಹಿಸು.
- Hosea 2:23 ಹೋಶೇಯ 2:23ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Psalm 72:17 ಕೀರ್ತನೆಗಳು 72:17ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
- Psalm 117:1–2 ಕೀರ್ತನೆಗಳು 117:1–2ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ. ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.