Zechariah · chapter 8 · verse 23
Zechariah 8:23 in Kannada
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
Sainyagala kartanu heege heluttaane--aa divasa galalli janaangagala samasta bhaasheyavarolaginda hattu manushyaru yehoodyanaagiruvavana seragannu hididu--naavu nimma sangada hogutteve; yaakandare nimma sangada devaru iddaanendu keliddeve endu heluvaru.
Zechariah 8:23 in English
- King James Version (KJV)
- Thus saith the LORD of hosts; In those days [it shall come to pass], that ten men shall take hold out of all languages of the nations, even shall take hold of the skirt of him that is a Jew, saying, We will go with you: for we have heard [that] God [is] with you.
- World English Bible (WEB)
- The LORD of Armies says: “In those days, ten men out of all the languages of the nations will take hold of the skirt of him who is a Jew, saying, ‘We will go with you, for we have heard that God is with you.’”
- American Standard Version (ASV)
- Thus saith Jehovah of hosts: In those days [it shall come to pass], that ten men shall take hold, out of all the languages of the nations, they shall take hold of the skirt of him that is a Jew, saying, We will go with you, for we have heard that God is with you.
- Bible in Basic English (BBE)
- This is what the Lord of armies has said: In those days, ten men from all the languages of the nations will put out their hands and take a grip of the skirt of him who is a Jew, saying, We will go with you, for it has come to our ears that God is with you.
- Darby Translation (DBY)
- Thus saith Jehovah of hosts: In those days shall ten men take hold, out of all languages of the nations, shall even take hold of the skirt of him that is a Jew, saying, We will go with you; for we have heard [that] God is with you.
- Webster's Bible (WBS)
- Thus saith the LORD of hosts: In those days [it shall come to pass] , that ten men out of all languages of the nations, shall take hold, shall even take hold of the skirt of him that is a Jew, saying, We will go with you: for we have heard [that] God [is] with you.
- Young's Literal Translation (YLT)
- Thus said Jehovah of Hosts: In those days take hold do ten men of all languages of the nations, Yea, they have taken hold on the skirt of a man, a Jew, saying: We go with you, for we heard God [is] with you!
Read in context
- 21ಒಂದರ ನಿವಾಸಿಗಳು ಮತ್ತೊಂದಕ್ಕೆ ಹೋಗಿ--ನಾವು ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಸೈನ್ಯಗಳ ಕರ್ತನನ್ನು ಹುಡುಕುವದಕ್ಕೂ ಬೇಗ ಹೋಗೋಣ; ನಾನು ಕೂಡ ಹೋಗುತ್ತೇನೆ ಎಂದು ಹೇಳುವರು.
- 22ಹೌದು, ಅನೇಕ ಜನಗಳೂ ಬಲವಾದ ಜನಾಂಗಗಳೂ ಸೈನ್ಯಗಳ ಕರ್ತನನ್ನು ಯೆರೂಸಲೇಮಿನಲ್ಲಿ ಹುಡುಕುವದಕ್ಕೂ ಕರ್ತನ ಮುಂದೆ ಬೇಡಿಕೊಳ್ಳುವದಕ್ಕೂ ಬರುವವು.ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
- 23ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಆ ದಿವಸ ಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು--ನಾವು ನಿಮ್ಮ ಸಂಗಡ ಹೋಗುತ್ತೇವೆ; ಯಾಕಂದರೆ ನಿಮ್ಮ ಸಂಗಡ ದೇವರು ಇದ್ದಾನೆಂದು ಕೇಳಿದ್ದೇವೆ ಎಂದು ಹೇಳುವರು.
Cross references
- Isaiah 55:5 ಯೆಶಾಯ 55:5ಇಗೋ, ನಿನ್ನ ದೇವರಾದ ಕರ್ತನ ನಿಮಿತ್ತವೂ ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆ ಯುವಿ; ಆತನು ನಿನ್ನನ್ನು ಮಹಿಮೆ ಪಡಿಸಿದ್ದರಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವವು.
- Isaiah 60:3 ಯೆಶಾಯ 60:3ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
- Isaiah 45:14 ಯೆಶಾಯ 45:14ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.
- 1 Corinthians 14:25 1 ಕೊರಿಂಥದವರಿಗೆ 14:25ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
- Acts 13:47–48 ಅಪೊಸ್ತಲರ ಕೃತ್ಯಗಳು 13:47–48ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ. ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು ಕರ್ತನ ವಾಕ್ಯವನ್ನು ಮಹಿಮೆ ಪಡಿಸಿದರು. ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.
- Ruth 1:16–17 ರೂತಳು 1:16–17ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು. ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.
- Joshua 2:9–13 ಯೆಹೋಶುವ 2:9–13ಕರ್ತನು ನಿಮಗೆ ದೇಶವನ್ನು ಕೊಟ್ಟಿದ್ದಾನೆಂದೂ ನಿಮ್ಮ ನಿಮಿತ್ತ ನಮಗೆ ಮಹಾಭೀತಿ ಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿ ಗಳೆಲ್ಲರು ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು. ನೀವು ಐಗುಪ್ತದಿಂದ ಹೊರಡುವಾಗ ಕರ್ತನು ನಿಮಗೋಸ್ಕರ ಕೆಂಪು ಸಮುದ್ರದ ನೀರನ್ನು ಬತ್ತಿಹೋಗ ಮಾಡಿದ್ದನ್ನೂ ಯೊರ್ದನಿಗೆ ಆಚೆಯಲ್ಲಿದ್ದ ಅಮೋರಿ ಯರ ಇಬ್ಬರು ಅರಸುಗಳಾದ ಸೀಹೋನನನ್ನು ಓಗನನ್ನು ನೀವು ಸಂಪೂರ್ಣ ನಿರ್ಮೂಲ ಮಾಡಿದ್ದನ್ನೂ ನಾವು ಕೇಳಿದ್ದೇವೆ. ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕರಗಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ಯಾಕಂದರೆ ನಿಮ್ಮ ದೇವರಾದ ಕರ್ತನೇ ಮೇಲಿರುವ ಆಕಾಶದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾನೆ. ಈಗ ನಾನು ನಿಮಗೆ ದಯ ತೋರಿಸಿದ್ದರಿಂದ ನೀವು ನನಗೆ ಮತ್ತು ನನ್ನ ತಂದೆಯ ಮನೆಗೆ ದಯತೋರಿಸಬೇಕು. ನನಗೆ ಸತ್ಯವಾದ ಗುರುತನ್ನು ಕೊಡಬೇಕು. ನನ್ನ ತಂದೆತಾಯಿಯನ್ನೂ ಸಹೋದರ ಸಹೋದರಿಯರನ್ನೂ ಅವರಿಗೆ ಇರುವದೆ ಲ್ಲವನ್ನೂ ಜೀವದಿಂದಿರಿಸಿ ನಮ್ಮ ಪ್ರಾಣಗಳನ್ನು ಸಾವಿ ನಿಂದ ಉಳಿಸುವದಾಗಿ ಕರ್ತನ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ಅಂದಳು.
- 1 Kings 8:42–43 1 ಅರಸುಗಳು 8:42–43ಅವರು ನಿನ್ನ ಮಹಾ ಹೆಸರನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ಕುರಿತು ಕೇಳುವರು. ಅವನು ಬಂದು ಈ ಮಂದಿರದ ಕಡೆಗೆ ಪ್ರಾರ್ಥನೆ ಮಾಡಿದರೆ ನಿನ್ನ ಜನರಾದ ಇಸ್ರಾಯೇಲ್ಯರ ಹಾಗೆ ಭೂಲೋಕದಲ್ಲಿರುವ ಸಮಸ್ತರು ನಿನಗೆ ಭಯಪಡುವದಕ್ಕಾಗಿ ನಿನ್ನ ಹೆಸರನ್ನು ತಿಳಿಯುವ ಹಾಗೆಯೂ ನಾನು ಕಟ್ಟಿಸಿದ ಈ ಮನೆಯು ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದೆ ಎಂದು ಅವರು ತಿಳಿಯುವ ಹಾಗೆಯೂ ನಿನ್ನ ನಿವಾಸವಾಗಿರುವ ಪರಲೋಕದಿಂದ ಕೇಳಿ ಪರದೇಶಸ್ಥನು ನಿನಗೆ ಕೂಗಿದ ಪ್ರಕಾರ ಮಾಡು.
- Acts 19:12 ಅಪೊಸ್ತಲರ ಕೃತ್ಯಗಳು 19:12ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
- Genesis 31:7 ಆದಿಕಾಂಡ 31:7ಆದರೆ ನಿಮ್ಮ ತಂದೆಯು ನನಗೆ ವಂಚನೆ ಮಾಡಿ ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿ ದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡುಮಾಡಗೊಡಿಸಲಿಲ್ಲ.
- Isaiah 66:18 ಯೆಶಾಯ 66:18ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು.
- Isaiah 4:1 ಯೆಶಾಯ 4:1ಆ ದಿವಸದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು--ನಾವು ಸ್ವಂತವಾಗಿ ದುಡಿದು ಉಣ್ಣುವೆವು; ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು; ನಮ್ಮ ನಿಂದೆಯನ್ನು ನೀಗಿಸುವದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು ಎಂದು ಕೇಳಿಕೊಳ್ಳುವರು ಎಂಬದೇ.
Original words (Hebrew)
- saith · H559אָמַר ʼâmar
- hosts · H6635צָבָא tsâbâʼ
- days · H3117יוֹם yôwm
- ten · H6235עֶשֶׂר ʻeser
- men · H582אֱנוֹשׁ ʼĕnôwsh
- hold · H2388חָזַק châzaq
- languages · H3956לָשׁוֹן lâshôwn
- nations · H1471גּוֹי gôwy
- hold · H2388חָזַק châzaq
- skirt · H3671כָּנָף kânâph
- Jew · H376אִישׁ ʼîysh
- saying · H559אָמַר ʼâmar
- go · H3212יָלַךְ yâlak
- heard · H8085שָׁמַע shâmaʻ
- God · H430אֱלֹהִים ʼĕlôhîym