Zechariah · chapter 9 · verse 12
Zechariah 9:12 in Kannada
ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.
Nireeksheya sereyavare, balavaada durgasthaanakke tirigiri, erada rashtu nimage koduvenendu ee hotte prakati suttene.
Zechariah 9:12 in English
- King James Version (KJV)
- Turn you to the strong hold, ye prisoners of hope: even to day do I declare [that] I will render double unto thee;
- World English Bible (WEB)
- Turn to the stronghold, you prisoners of hope! Even today I declare that I will restore double to you.
- American Standard Version (ASV)
- Turn you to the stronghold, ye prisoners of hope: even to-day do I declare that I will render double unto thee.
- Bible in Basic English (BBE)
- And they will come back to you, O daughter of Zion, as prisoners of hope: today I say to you that I will give you back twice as much;
- Darby Translation (DBY)
- Turn again to the stronghold, prisoners of hope! even to-day do I declare I will render double unto thee.
- Webster's Bible (WBS)
- Turn ye to the strong hold, ye prisoners of hope: even to-day do I declare [that] I will render double to thee;
- Young's Literal Translation (YLT)
- Turn back to a fenced place, Ye prisoners of the hope, Even to-day a second announcer I restore to thee.
Read in context
- 10ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
- 11ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
- 12ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.
- 13ಯೆಹೂದವನ್ನು ನನಗಾಗಿ ಬೊಗ್ಗಿಸಿದಾಗ ಎಫ್ರಾಯಾಮನ್ನು ಬಿಲ್ಲುಗಳಿಂದ ತುಂಬಿಸಿದ್ದೇನೆ; ಚೀಯೋನೇ, ನಿನ್ನ ಕುಮಾರರನ್ನು ಗ್ರೀಕ್ ಕುಮಾರರಿಗೆ ವಿರೋಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯಂತೆ ಮಾಡಿದ್ದೇನೆ.
- 14ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.
Cross references
- Job 42:10 ಯೋಬನು 42:10ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.
- Isaiah 61:7 ಯೆಶಾಯ 61:7ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.
- Lamentations 3:21–22 ಪ್ರಲಾಪಗಳು 3:21–22ಇದನ್ನು ನಾನು ನನ್ನ ಮನಸ್ಸಿಗೆ ತರುತ್ತೇನೆ, ಆದದರಿಂದ ನನಗೆ ನಿರೀಕ್ಷೆ ಇದೆ. ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
- Hebrews 6:18 ಇಬ್ರಿಯರಿಗೆ 6:18ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- Isaiah 40:2 ಯೆಶಾಯ 40:2ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
- Jeremiah 31:17 ಯೆರೆಮೀಯ 31:17ನಿನ್ನ ಅಂತ್ಯದಲ್ಲಿ ನಿರೀಕ್ಷೆ ಉಂಟೆಂದು ಕರ್ತನು ಅನ್ನುತ್ತಾನೆ; ನಿನ್ನ ಮಕ್ಕಳು ತಮ್ಮ ಮೇರೆಗೆ ತಿರುಗಿ ಬರುವರು.
- Jeremiah 51:10 ಯೆರೆಮೀಯ 51:10ಕರ್ತನು ನಮ್ಮ ನೀತಿಯನ್ನು ಹೊರಗೆ ತಂದಿದ್ದಾನೆ; ಬನ್ನಿ, ನಮ್ಮ ದೇವರಾದ ಕರ್ತನ ಕ್ರಿಯೆಯನ್ನು, ಚೀಯೋನಿನಲ್ಲಿ ಸಾರಿ ಹೇಳೋಣ.
- Nahum 1:7 ನಹೂಮ 1:7ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
- Hosea 2:15 ಹೋಶೇಯ 2:15ಅವಳ ದ್ರಾಕ್ಷೇ ತೋಟಗಳನ್ನು ಅಲ್ಲಿರುವಾ ಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಅಲ್ಲಿ ಅವಳು ಯೌವನದ ದಿನಗಳಲ್ಲಿಯೂ ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿಯೂ ಆದ ಹಾಗೆ ಹಾಡುವಳು.
- Joel 3:16 ಯೋವೇಲ 3:16ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
- Jeremiah 50:4–5 ಯೆರೆಮೀಯ 50:4–5ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು. ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ--ಬನ್ನಿ, ಮರೆತುಹೋಗದ ನಿತ್ಯವಾದ ಒಡಂಬಡಿಕೆಯಿಂದ ಕರ್ತನನ್ನು ಸೇರಿಸಿ ಕೊಳ್ಳೋಣ ಅನ್ನುವರು.
- Ezekiel 37:11 ಯೆಹೆಜ್ಕೇಲನು 37:11ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.