Zechariah · chapter 9 · verse 13
Zechariah 9:13 in Kannada
ಯೆಹೂದವನ್ನು ನನಗಾಗಿ ಬೊಗ್ಗಿಸಿದಾಗ ಎಫ್ರಾಯಾಮನ್ನು ಬಿಲ್ಲುಗಳಿಂದ ತುಂಬಿಸಿದ್ದೇನೆ; ಚೀಯೋನೇ, ನಿನ್ನ ಕುಮಾರರನ್ನು ಗ್ರೀಕ್ ಕುಮಾರರಿಗೆ ವಿರೋಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯಂತೆ ಮಾಡಿದ್ದೇನೆ.
Yehoodavannu nanagaagi boggisidaaga ephraayaamannu billugalinda tumbisiddene; cheeyone, ninna kumaararannu greek kumaararige virodhavaagi ebbisi ninnannu shoorana kattiyante maadiddene.
Zechariah 9:13 in English
- King James Version (KJV)
- When I have bent Judah for me, filled the bow with Ephraim, and raised up thy sons, O Zion, against thy sons, O Greece, and made thee as the sword of a mighty man.
- World English Bible (WEB)
- For indeed I bend Judah as a bow for me. I have loaded the bow with Ephraim. I will stir up your sons, Zion, against your sons, Greece, and will make you like the sword of a mighty man.
- American Standard Version (ASV)
- For I have bent Judah for me, I have filled the bow with Ephraim; and I will stir up thy sons, O Zion, against thy sons, O Greece, and will make thee as the sword of a mighty man.
- Bible in Basic English (BBE)
- For I have made Judah a bow bent for my use, I have made Ephraim the arrows of the bow; I will make your sons, O Zion, take up arms against your sons, O Greece, and will make you like the sword of a man of war.
- Darby Translation (DBY)
- For I have bent Judah for me, I have filled the bow with Ephraim; and I will raise up thy sons, O Zion, against thy sons, O Greece, and make thee like the sword of a mighty man.
- Webster's Bible (WBS)
- When I have bent Judah for me, filled the bow with Ephraim, and raised up thy sons, O Zion, against thy sons, O Greece, and made thee as the sword of a mighty man.
- Young's Literal Translation (YLT)
- For I have trodden for Me Judah, A bow I have filled [with] Ephraim, And I have stirred up thy sons, O Zion, Against thy sons, O Javan, And I have set thee as the sword of a hero.
Read in context
- 11ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
- 12ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.
- 13ಯೆಹೂದವನ್ನು ನನಗಾಗಿ ಬೊಗ್ಗಿಸಿದಾಗ ಎಫ್ರಾಯಾಮನ್ನು ಬಿಲ್ಲುಗಳಿಂದ ತುಂಬಿಸಿದ್ದೇನೆ; ಚೀಯೋನೇ, ನಿನ್ನ ಕುಮಾರರನ್ನು ಗ್ರೀಕ್ ಕುಮಾರರಿಗೆ ವಿರೋಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯಂತೆ ಮಾಡಿದ್ದೇನೆ.
- 14ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.
- 15ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.
Cross references
- Revelation 17:14 ಪ್ರಕಟನೆ 17:14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- Zechariah 10:3–7 ಜೆಕರ್ಯ 10:3–7ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯಿತು; ಮೇಕೆಗಳನ್ನು ದಂಡಿಸಿದೆನು; ಸೈನ್ಯಗಳ ಕರ್ತನು ತನ್ನ ಮಂದೆಯಾಗಿರುವ ಯೆಹೂದನ ಮನೆ ತನದವರನ್ನು ದರ್ಶಿಸಿ ಅವರನ್ನು ಯುದ್ಧದಲ್ಲಿ ತನ್ನ ಘನವಾದ ಕುದುರೆಯ ಹಾಗೆ ಮಾಡಿದ್ದಾನೆ. ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ. ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು. ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು. ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು.
- Isaiah 49:2 ಯೆಶಾಯ 49:2ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
- Zechariah 12:2–8 ಜೆಕರ್ಯ 12:2–8ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು. ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು. ಆಗ ಯೆಹೂದದ ದೊರೆ ಗಳು ತಮ್ಮ ಹೃದಯದಲ್ಲಿ--ಯೆರೂಸಲೇಮಿನ ನಿವಾಸಿ ಗಳು ಅವರ ದೇವರಾದ ಸೈನ್ಯಗಳ ಕರ್ತನಲ್ಲಿ ನಮಗೆ ಬಲವಾಗಿದ್ದಾರೆಂದು ಅವರು ಅಂದುಕೊಳ್ಳುವರು. ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು. ಇದಲ್ಲದೆ ದಾವೀದನ ಮನೆಯ ಘನತೆಯೂ ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ ಕರ್ತನು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವನು. ಆ ದಿನದಲ್ಲಿ ಕರ್ತನು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವನು; ಆ ದಿನದಲ್ಲಿ ಅವರೊಳಗೆ ಬಲಹೀನನು ದಾವೀದನ ಹಾಗೆಯೂ ದಾವೀದನ ಮನೆತನದವರು ದೇವರ ಹಾಗೆಯೂ ಅಂದರೆ ಅವರ ಮುಂದೆ ಕರ್ತನ ದೂತನ ಹಾಗೆಯೂ ಇರುವರು.
- Revelation 19:15 ಪ್ರಕಟನೆ 19:15ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
- Hebrews 4:12 ಇಬ್ರಿಯರಿಗೆ 4:12ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
- Joel 3:6–8 ಯೋವೇಲ 3:6–8ಯೆಹೂದದ ಮಕ್ಕಳನ್ನೂ ಯೆರೂಸಲೇಮಿನ ಮಕ್ಕ ಳನ್ನೂ ತಮ್ಮ ಪ್ರಾಂತ್ಯಗಳಿಂದ ದೂರ ಮಾಡುವ ಹಾಗೆ ಗ್ರೀಕರಿಗೆ ಮಾರಿದ್ದೀರಿ. ಇಗೋ, ಎಲ್ಲಿ ಅವ ರನ್ನು ಮಾರಿದ್ದಿರೋ ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು. ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ.
- Zechariah 1:21 ಜೆಕರ್ಯ 1:21ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
- Psalm 45:3 ಕೀರ್ತನೆಗಳು 45:3ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.
- Micah 5:4–9 ಮೀಕ 5:4–9ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು. ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು. ಅವರು ಅಶ್ಶೂರಿನ ದೇಶವನ್ನು ಕತ್ತಿಯಿಂದಲೂ ನಿಮ್ರೋದನ ದೇಶವನ್ನು ಅದರ ಪ್ರವೇಶಗಳಲ್ಲಿಯೂ ಹಾಳುಮಾಡುವರು; ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರಾಂತ್ಯಗಳಲ್ಲಿ ತುಳಿಯುವಾಗ ಆತನು ನಮ್ಮನ್ನು ತಪ್ಪಿಸುವನು. ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ. ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು. ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತ ವಾಗಿರುವದು; ನಿನ್ನ ಶತ್ರುಗಳೆಲ್ಲರು ಕಡಿದು ಬಿಡಲ್ಪಡುವರು.
- Lamentations 4:2 ಪ್ರಲಾಪಗಳು 4:2ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಕುಮಾರರು ಹೇಗೆ ಮಣ್ಣಿನ ಪಾತ್ರೆಗಳಂತೆಯೂ ಕುಂಬಾರನ ಕೈಕೆಲಸದ ಹಾಗೆಯೂ ಎಣಿಸಲ್ಪಟ್ಟಿ ದ್ದಾರಲ್ಲಾ!
- Psalm 149:6 ಕೀರ್ತನೆಗಳು 149:6ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ.
Original words (Hebrew)
- bent · H1869דָּרַךְ dârak
- Judah · H3063יְהוּדָה Yᵉhûwdâh
- filled · H4390מָלֵא mâlêʼ
- bow · H7198קֶשֶׁת qesheth
- Ephraim · H669אֶפְרַיִם ʼEphrayim
- up · H5782עוּר ʻûwr
- sons · H1121בֵּן bên
- Zion · H6726צִיּוֹן Tsîyôwn
- sons · H1121בֵּן bên
- Greece · H3120יָוָן Yâvân
- made · H7760שׂוּם sûwm
- sword · H2719חֶרֶב chereb
- man · H1368גִּבּוֹר gibbôwr