Zechariah · chapter 9 · verse 2
Zechariah 9:2 in Kannada
ಹಮಾತು ಬಹಳ ಜ್ಞಾನವಿರುವ ತೂರ್ ಚೀದೋನ್ ಸಹ ಅದರ ಮೇರೆಯಾಗಿದೆ.
Hamaatu bahala jnyaanaviruva toor cheedon saha adara mereyaagide.
Zechariah 9:2 in English
- King James Version (KJV)
- And Hamath also shall border thereby; Tyrus, and Zidon, though it be very wise.
- World English Bible (WEB)
- and Hamath, also, which borders on it, Tyre and Sidon, because they are very wise.
- American Standard Version (ASV)
- and Hamath, also, which bordereth thereon; Tyre and Sidon, because they are very wise.
- Bible in Basic English (BBE)
- As well as Hamath, which is by its limit, and Tyre and Zidon, because they are very wise.
- Darby Translation (DBY)
- and also [on] Hamath [which] bordereth thereon; on Tyre and Zidon, though she be very wise.
- Webster's Bible (WBS)
- And Hamath also shall border by it; Tyre and Zidon, though it be very wise.
- Young's Literal Translation (YLT)
- And also Hamath doth border thereon, Tyre and Zidon, for — very wise!
Read in context
- 1ಹದ್ರಾಕಿನ ದೇಶದ ವಿಷಯವಾದ ಕರ್ತನ ವಾಕ್ಯದ ಭಾರವು; ಅದು ದಮಸ್ಕದಲ್ಲಿ ತಂಗುವದು; ಮನುಷ್ಯನ ಕಣ್ಣುಗಳು ಇಸ್ರಾಯೇಲಿನ ಎಲ್ಲಾ ಗೋತ್ರಗಳಂತೆ ಕರ್ತನ ಕಡೆಗೆ ಇರುವವು.
- 2ಹಮಾತು ಬಹಳ ಜ್ಞಾನವಿರುವ ತೂರ್ ಚೀದೋನ್ ಸಹ ಅದರ ಮೇರೆಯಾಗಿದೆ.
- 3ತೂರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.
- 4ಇಗೋ, ಕರ್ತನು ಅದನ್ನು ಹೊರಗೆ ಹಾಕುವನು; ಸಮುದ್ರದಲ್ಲಿ ಅದರ ಬಲವನ್ನು ಹೊಡೆಯುವನು; ಅದು ಬೆಂಕಿ ಯಿಂದ ದಹಿಸಲ್ಪಡುವದು.
Cross references
- Ezekiel 28:12 ಯೆಹೆಜ್ಕೇಲನು 28:12ಮನುಷ್ಯಪುತ್ರನೇ, ತೂರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು--ದೇವರಾದ ಕರ್ತನು ಹೀಗೆ ಹೇಳು ತ್ತಾನೆ, ಸಂಪೂರ್ಣ ಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.
- Jeremiah 49:23 ಯೆರೆಮೀಯ 49:23ದಮಸ್ಕದ ವಿಷಯವಾಗಿ ಹಮಾತೂ ಅರ್ಪಾದೂ ನಾಚಿಕೆಪಡುತ್ತವೆ; ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯ ಪಟ್ಟಿವೆ. ಸಮುದ್ರದಂತೆ ಕಳವಳಪಡುತ್ತದೆ, ಅದು ಸಮ್ಮನಿರಲಾರದು.
- Ezekiel 28:2–5 ಯೆಹೆಜ್ಕೇಲನು 28:2–5ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ. ಇಗೋ, ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆ; ರಹಸ್ಯವಾದದ್ದು ಏನಿದ್ದರೂ ನಿನಗೆ ಮರೆಯಾಗಿರುವದಿಲ್ಲ. ನಿನ್ನ ಜ್ಞಾನ ದಿಂದಲೂ ವಿವೇಕದಿಂದಲೂ ನಿನಗೆ ದ್ರವ್ಯವನ್ನುಂಟು ಮಾಡಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ. ನಿನ್ನ ಅಧಿಕ ಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವಿ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯವು ಹೆಚ್ಚಿಸಿಕೊಂಡಿದೆ;
- Joel 3:4–8 ಯೋವೇಲ 3:4–8ಹೌದು, ಓ ತೂರೇ, ಚೀದೋನೇ, ಪಾಲೆಸ್ತಿನದ ಎಲ್ಲಾ ಪ್ರಾಂತ್ಯಗಳೇ, ನನ್ನ ಕೂಡ ನಿಮಗೇನು? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ನನಗೆ ಸಲ್ಲಿಸಿದರೆ ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು. ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ ತೆಗೆದುಕೊಂಡು ನನ್ನ ಒಳ್ಳೇ ರಮ್ಯವಾದವುಗಳನ್ನು ನಿಮ್ಮ ದೇವಸ್ಥಾನಗಳಿಗೆ ತಕ್ಕೊಂಡು ಹೋಗಿದ್ದೀರಿ. ಯೆಹೂದದ ಮಕ್ಕಳನ್ನೂ ಯೆರೂಸಲೇಮಿನ ಮಕ್ಕ ಳನ್ನೂ ತಮ್ಮ ಪ್ರಾಂತ್ಯಗಳಿಂದ ದೂರ ಮಾಡುವ ಹಾಗೆ ಗ್ರೀಕರಿಗೆ ಮಾರಿದ್ದೀರಿ. ಇಗೋ, ಎಲ್ಲಿ ಅವ ರನ್ನು ಮಾರಿದ್ದಿರೋ ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು. ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ.
- Obadiah 1:20 ಓಬದ್ಯ 1:20ಇದಲ್ಲದೆ ಚಾರೆಪತಿನ ವರೆಗೂ ಕಾನಾನ್ಯರಲ್ಲಿರುವ ಇಸ್ರಾಯೇಲನ ಮಕ್ಕಳ ಈ ಸೈನ್ಯದ ಸೆರೆಯವರು ಸೆಫರಾದಿನಲ್ಲಿರುವ ಯೆರೂ ಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀ ನಮಾಡಿಕೊಳ್ಳುವರು.ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
- Amos 6:14 ಆಮೋಸ 6:14ಇಗೋ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುತ್ತೇನೆ; ಇಸ್ರಾಯೇಲಿನ ಮನೆತನದವರೇ, ಹಮಾತಿನ ಪ್ರದೇಶದಿಂದ ಹಿಡಿದು ಅರಣ್ಯದ ನದಿಯ ವರೆಗೂ ನಿಮ್ಮನ್ನು ಹಿಂಸಿಸುತ್ತೇನೆ ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
- Isaiah 23:1–18 ಯೆಶಾಯ 23:1–18ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು. ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನ ವಾಗಿರ್ರಿ. ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು. ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ. ಐಗುಪ್ತದ ಸುದ್ದಿಗೆ ಆದ ಹಾಗೆ ತೂರಿನ ಸುದ್ದಿಗೆ ಬಹಳ ವೇದನೆಪಡು ವರು. ತಾರ್ಷೀಷಿಗೆ ದಾಟಿಹೋಗಿರಿ, ದ್ವೀಪ ನಿವಾ ಸಿಗಳೇ ಗೋಳಾಡಿರಿ. ನಿಮ್ಮ ಉಲ್ಲಾಸದ ಪಟ್ಟಣವೂ ಪೂರ್ವಕಾಲದ ಹಳೆಯ ಸಂಪ್ರದಾಯದಿಂದ ಬಂದಿದ್ದೂ ಇದೆಯೋ? ಅವಳ ಸ್ವಂತ ಕಾಲುಗಳು ಅದನ್ನು ದೂರ ದೇಶದಲ್ಲಿ ನಿವಾಸಿಸುವದಕ್ಕೆ ತಕ್ಕೊಂಡು ಹೋ ಗುವವು. ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು? ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ. ತಾರ್ಷೀಷಿನ ಮಗಳೇ, ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು, ಅಲ್ಲಿ ಇನ್ನು ಬಲವು ಇರುವುದೇ ಇಲ್ಲ. ಆತನು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕರ್ತನು ವ್ಯಾಪಾರದ ಪಟ್ಟಣವನ್ನು (ಕಾನಾನ್) ಅದರ ದುರ್ಗ ಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾನೆ. ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು. ಇಗೋ, ಕಸ್ದೀಯರ ದೇಶವು! ಅಶ್ಶೂರರು ಅದನ್ನು ಅರಣ್ಯ ನಿವಾಸಿಗಳಿಗೆ ಈಡು ಮಾಡುವತನಕ ಈ ಜನರು ಇರಲಿಲ್ಲ. (ನಿರ್ನಾ ಮವಾಗಿರಲಿಲ್ಲ) ಅವರು ಗೋಪುರಗಳನ್ನೂ ಅದರ ಅರಮನೆಗಳನ್ನೂ ಕಟ್ಟಿಸಿಕೊಂಡು ಅದನ್ನು ಹಾಳು ಮಾಡಿದ್ದಾರೆ. ತಾರ್ಷೀಷಿನ ಹಡಗುಗಳೇ, ಗೋ ಳಾಡಿರಿ! ನಮ್ಮ ಆಶ್ರಯಸ್ಥಾನವು ಹಾಳಾಯಿತು. ಆ ದಿವಸದಲ್ಲಿ ಆಗುವದೇನಂದರೆ, ತೂರ್ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ (ಮೂಲ ದಿನಗಳು) ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷಗಳ ಕೊನೆಯಲ್ಲಿ ತೂರ್ ಪಟ್ಟಣವು ಸೂಳೆಯರ ವಿಷಯವಾದ ಗೀತೆಯ ಹಾಗಾಗುವದು. ಮರೆತುಹೋದ ಸೂಳೆಯೇ, ಕಿನ್ನರಿಯನ್ನು ತಕ್ಕೋ, ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ ಬಹಳ ಗೀತೆಗಳನ್ನು ಹಾಡು (ಎಂಬದೇ). ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು. (ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
- 1 Kings 17:9 1 ಅರಸುಗಳು 17:9ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು.
- 2 Kings 23:33 2 ಅರಸುಗಳು 23:33ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.
- Ezekiel 28:21–26 ಯೆಹೆಜ್ಕೇಲನು 28:21–26ಮನುಷ್ಯಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು. ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು. ಅದರಲ್ಲಿ ವ್ಯಾಧಿಯನ್ನೂ ಬೀದಿಗಳಲ್ಲಿ ರಕ್ತವನ್ನು ಕಳುಹಿಸುವೆನು; ಸುತ್ತಲೂ ಅದಕ್ಕೆ ವಿರುದ್ಧವಾಗಿ ಕತ್ತಿಯಿಂದ ಹತವಾದವರು ಅದರಲ್ಲಿ ಬೀಳುವರು; ಆಗ ನಾನೇ ಕರ್ತನೆಂದು ತಿಳಿಯುವರು. ಇಸ್ರಾಯೇಲ್ ವಂಶದವರಿಗೆ ಚುಚ್ಚುವ ದತ್ತೂರಿ ಸುತ್ತಲೂ ಹೀನೈಸುವ ನೋಯಿಸುವ ಮುಳ್ಳು ಇನ್ನಿರದು; ನಾನೇ ದೇವರಾದ ಕರ್ತನೆಂದು ಅವರಿಗೆ ತಿಳಿಯುವದು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲ್ಯರ ಮನೆತನದವರನ್ನು ಚದರಿಹೋದ ಜನಾಂಗದಿಂದ ಒಂದುಗೂಡಿಸಿ ಅನ್ಯಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧವಾದ ಮೇಲೆ ಇಸ್ರಾ ಯೇಲ್ಯರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ದೇಶದಲ್ಲಿಯೇ ವಾಸಿಸುವರು;ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು. ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.
- Ezekiel 26:1–21 ಯೆಹೆಜ್ಕೇಲನು 26:1–21ಹನ್ನೊಂದನೇ ವರುಷದ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- ಮನುಷ್ಯಪುತ್ರನೇ, ತೂರ್, ಯೆರೂಸಲೇಮಿನ ವಿಷಯವಾಗಿ ಆಹಾ, ಜನರ ದ್ವಾರವಾಗಿದ್ದದ್ದು ಮುರಿದು ಹೋಯಿತು, ಅದು ನನ್ನ ಕಡೆಗೆ ತಿರುಗಿಕೊಂಡಿದೆ, ಯೆರೂಸಲೇಮು ಹಾಳಾದ ಕಾರಣ ನಾನು ತುಂಬಿಕೊಳ್ಳುವೆನು ಎಂದು ಹೇಳಿದ್ದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು. ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು. ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು, ಇದಲ್ಲದೆ ಬಯಲು ಭೂಮಿಯಲ್ಲಿ ರುವ ಅದರ ಕುಮಾರ್ತೆಯರು ಖಡ್ಗದಿಂದ ಕೊಲ್ಲಲ್ಪಡು ವರು, ಆಗ ನಾನೇ ಕರ್ತನೆಂದು ಎಲ್ಲರಿಗೂ ತಿಳಿಯುವದು. ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ. ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಕೋಟೆಯನ್ನು ಕಟ್ಟಿ ದಿಬ್ಬ ಹಾಕಿ ನಿನಗೆ ವಿರೋಧವಾಗಿ ಖೇಡ್ಯವನ್ನು ಎತ್ತುವನು; ತನ್ನ ಯುದ್ಧಯಂತ್ರಗಳನ್ನು ನಿನ್ನ ಗೋಡೆಗಳಿಗೆ ವಿರೋಧ ವಾಗಿ ತಾಕಿಸುವೆನು ನಿನ್ನ ಗೋಪುರಗಳನ್ನು ತನ್ನ ಕೊಡಲಿಗಳಿಂದ ಒಡೆದು ಬಿಡುವನು. ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು. ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನೆಲ್ಲಾ ತುಳಿಸುವನು; ಜನರನ್ನು ಕತ್ತಿಯಿಂದ ಕೊಲ್ಲುವನು; ಬಲವಾದ ಕೋಟೆಗಳು ನೆಲಕ್ಕೆ ಬೀಳುವವು. ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ಸರಕುಗಳನ್ನು ಕೊಳ್ಳೇ ಹೊಡೆದು, ಗೋಡೆಗಳನ್ನು ಒಡೆದು, ರಮ್ಯವಾದ ಮನೆಗಳನ್ನು ಕೆಡವಿ, ಕಲ್ಲುಗಳನ್ನೂ ಮರಗಳನ್ನೂ ದೂಳನ್ನೂ ನೀರಿನಲ್ಲಿ ಹಾಕುವರು. ಆಗ ನಿನ್ನ ಹಾಡು ಗಳ ಶಬ್ದವನ್ನು ನಿಲ್ಲಿಸುವೆನು, ಇನ್ನು ನಿನ್ನ ಕಿನ್ನರಿಗಳ ಧ್ವನಿ ಕೇಳಲ್ಪಡುವದಿಲ್ಲ. ನಿನ್ನನ್ನು ಬಂಡೆಯ ತುದಿ ಯಂತೆ ಮಾಡುವೆನು. ನೀನು ಅಲ್ಲಿ ಬಲೆ ಹಾಸುವ ಸ್ಥಳವಾಗುವಿ. ಇನ್ನು ನೀನು ಕಟ್ಟಲ್ಪಡುವದಿಲ್ಲ; ಯಾಕಂ ದರೆ ಕರ್ತನಾದ ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ದೇವರಾದ ಕರ್ತನು ತೂರಿಗೆ ಹೀಗೆ ಹೇಳು ತ್ತಾನೆ--ನಿಮ್ಮನ್ನು ಬೀಳುವಿಕೆಯ ಶಬ್ದದಿಂದಲೂ ಗಾಯ ಪಟ್ಟವರು ಕೂಗುವಾಗಲೂ ನಿನ್ನ ಮಧ್ಯದಲ್ಲಿ ಕೊಲೆ ಯಾಗುವಾಗಲೂ ದ್ವೀಪಗಳು ನಡುಗುವದಿಲ್ಲವೇ? ಆಮೇಲೆ ಸಮುದ್ರದ ಎಲ್ಲಾ ಪ್ರಭುಗಳು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲು ವಂಗಿಗಳನ್ನು ತೆಗೆದುಹಾಕುವರು, ಚಿತ್ರವಾಗಿ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು; ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳು ವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯ ವಾಗಿ ಆಶ್ಚರ್ಯಪಡುವರು. ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ? ಈಗ ನೀನು ಬೀಳುವ ದಿವಸದಲ್ಲಿ ದ್ವೀಪಗಳು ನಡುಗುವವು ಹೌದು, ನೀನು ಹೋಗಿಬಿಡುವದರಿಂದ ಸಮುದ್ರದಲ್ಲಿರುವ ದ್ವೀಪಗಳು ಗಾಬರಿಯಾಗುವವು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧವನ್ನು ನಿನ್ನ ಮೇಲೆ ಬರ ಮಾಡುವೆನು. ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವ ಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವ ಲೋಕದಲ್ಲಿ ನೆಲೆಗೊಳಿಸದ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರ ಸಹವಾಸಕ್ಕೆ ಸೇರಿಸುವೆನು.ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ. ನಾನೂ ನಿನ್ನನ್ನು ದಿಗಿಲುಪಡಿಸುವೆನು, ಇನ್ನು ಮೇಲೆ ನೀನು ಇರುವದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡು ಕಿದರೂ ನೀನು ಸಿಗುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
- Numbers 13:21 ಅರಣ್ಯಕಾಂಡ 13:21ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.