Zechariah · chapter 9 · verse 4
Zechariah 9:4 in Kannada
ಇಗೋ, ಕರ್ತನು ಅದನ್ನು ಹೊರಗೆ ಹಾಕುವನು; ಸಮುದ್ರದಲ್ಲಿ ಅದರ ಬಲವನ್ನು ಹೊಡೆಯುವನು; ಅದು ಬೆಂಕಿ ಯಿಂದ ದಹಿಸಲ್ಪಡುವದು.
Igo, kartanu adannu horage haakuvanu; samudradalli adara balavannu hodeyuvanu; adu benki yinda dahisalpaduvadu.
Zechariah 9:4 in English
- King James Version (KJV)
- Behold, the Lord will cast her out, and he will smite her power in the sea; and she shall be devoured with fire.
- World English Bible (WEB)
- Behold, the Lord will dispossess her, and he will strike her power in the sea; and she will be devoured with fire.
- American Standard Version (ASV)
- Behold, the Lord will dispossess her, and he will smite her power in the sea; and she shall be devoured with fire.
- Bible in Basic English (BBE)
- See, the Lord will take away her heritage, overturning her power in the sea; and she will be burned up with fire.
- Darby Translation (DBY)
- Behold, the Lord will take possession of her, and he will smite her power in the sea; and she shall be devoured with fire.
- Webster's Bible (WBS)
- Behold, the LORD will cast her out, and he will smite her power in the sea; and she shall be devoured with fire.
- Young's Literal Translation (YLT)
- Lo, the Lord doth dispossess her, And He hath smitten in the sea her force, And she with fire is consumed.
Read in context
- 2ಹಮಾತು ಬಹಳ ಜ್ಞಾನವಿರುವ ತೂರ್ ಚೀದೋನ್ ಸಹ ಅದರ ಮೇರೆಯಾಗಿದೆ.
- 3ತೂರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.
- 4ಇಗೋ, ಕರ್ತನು ಅದನ್ನು ಹೊರಗೆ ಹಾಕುವನು; ಸಮುದ್ರದಲ್ಲಿ ಅದರ ಬಲವನ್ನು ಹೊಡೆಯುವನು; ಅದು ಬೆಂಕಿ ಯಿಂದ ದಹಿಸಲ್ಪಡುವದು.
- 5ಅಷ್ಕಲೋನು ನೋಡಿ ಭಯಪಡುವದು; ಗಾಜ ಸಹ ಅದನ್ನು ನೋಡಿ ಬಹಳವಾಗಿ ವೇದನೆಪಡುವದು, ಎಕ್ರೋನು ಸಹ; ಅದರ ನಿರೀಕ್ಷೆಯು ಅದನ್ನು ನಾಚಿಕೆ ಪಡಿಸಿತು; ಗಾಜ ದೊಳಗಿಂದ ಅರಸನು ನಾಶವಾಗುವನು; ಅಷ್ಕೆಲೋನು ನಿವಾಸವಿಲ್ಲದೆ ಇರುವದು.
- 6ಅಷ್ಡೋದಿನಲ್ಲಿ ಜಾರತ್ವ ದಿಂದ ಹುಟ್ಟಿದವನು ವಾಸವಾಗುತ್ತಾನೆ; ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು.
Cross references
- Ezekiel 28:18 ಯೆಹೆಜ್ಕೇಲನು 28:18ನಿನ್ನ ಅಪಾರವಾದ ಅಪರಾಧಗ ಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನು ಬರಮಾಡಿದೆನು, ಅದು ನಿನ್ನನ್ನು ನುಂಗಿತು; ನೋಡು ವವರೆಲ್ಲರ ಮುಂದೆ ನಿನ್ನನ್ನು ಬೂದಿ ಮಾಡುವೆನು;
- Amos 1:10 ಆಮೋಸ 1:10ಆದರೆ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.
- Ezekiel 26:17 ಯೆಹೆಜ್ಕೇಲನು 26:17ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವದೇನಂದರೆ, ಸಮು ದ್ರಗಳ ಬಳಿಯಲ್ಲಿ ವಾಸಿಸಿದವಳೇ, ಹೆಸರು ಗೊಂಡ ಪಟ್ಟಣವೇ, ನೀನೂ ತನ್ನ ನಿವಾಸಿಗಳೂ ಸಮುದ್ರದಲ್ಲಿ ಬಲವಾಗಿದ್ದವಳೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದಿ?
- Ezekiel 28:16 ಯೆಹೆಜ್ಕೇಲನು 28:16ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ; ಆದದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ಬಿಸಾಡುವೆನು. ಓ ಮುಚ್ಚುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
- Ezekiel 27:26–36 ಯೆಹೆಜ್ಕೇಲನು 27:26–36ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ. ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು. ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು. ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು, ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ; ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು. ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು? ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ. ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು. ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ. ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
- Proverbs 10:2 ಜ್ಞಾನೋಕ್ತಿಗಳು 10:2ಕೆಟ್ಟತನದ ಸಂಪತ್ತುಗಳು ಪ್ರಯೋಜನವಿಲ್ಲ; ನೀತಿಯು ಮರಣದಿಂದ ಬಿಡಿಸುತ್ತದೆ.
- Ezekiel 26:3–5 ಯೆಹೆಜ್ಕೇಲನು 26:3–5ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು. ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು. ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು,
- Ezekiel 28:2 ಯೆಹೆಜ್ಕೇಲನು 28:2ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ.
- Proverbs 11:4 ಜ್ಞಾನೋಕ್ತಿಗಳು 11:4ಉಗ್ರತೆಯ ದಿನದಲ್ಲಿ ಐಶ್ವರ್ಯವು ಲಾಭಕರವಾಗುವದಿಲ್ಲ; ನೀತಿಯು ಮರಣ ದಿಂದ ಬಿಡಿಸುತ್ತದೆ.
- Joel 3:8 ಯೋವೇಲ 3:8ನಿಮ್ಮ ಕುಮಾರರನ್ನೂ ನಿಮ್ಮ ಕುಮಾರ್ತೆ ಯರನ್ನೂ ಯೆಹೂದನ ಮಕ್ಕಳ ಕೈಯಲ್ಲಿ ಮಾರುವೆನು; ಇವರು ಅವರನ್ನು ದೂರ ಜನವಾದ ಶೆಬದನರಿಗೆ ಮಾರುವರು; ಕರ್ತನು ಅದನ್ನು ಹೇಳಿದ್ದಾನೆ.
- Ezekiel 28:8 ಯೆಹೆಜ್ಕೇಲನು 28:8ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು, ಸಮುದ್ರಗಳ ಮಧ್ಯದಲ್ಲಿ ಹತವಾದವರ ಹಾಗೆ ನೀನು ಸಾಯುವೆ.
- Isaiah 23:1–7 ಯೆಶಾಯ 23:1–7ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು. ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನ ವಾಗಿರ್ರಿ. ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು. ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ. ಐಗುಪ್ತದ ಸುದ್ದಿಗೆ ಆದ ಹಾಗೆ ತೂರಿನ ಸುದ್ದಿಗೆ ಬಹಳ ವೇದನೆಪಡು ವರು. ತಾರ್ಷೀಷಿಗೆ ದಾಟಿಹೋಗಿರಿ, ದ್ವೀಪ ನಿವಾ ಸಿಗಳೇ ಗೋಳಾಡಿರಿ. ನಿಮ್ಮ ಉಲ್ಲಾಸದ ಪಟ್ಟಣವೂ ಪೂರ್ವಕಾಲದ ಹಳೆಯ ಸಂಪ್ರದಾಯದಿಂದ ಬಂದಿದ್ದೂ ಇದೆಯೋ? ಅವಳ ಸ್ವಂತ ಕಾಲುಗಳು ಅದನ್ನು ದೂರ ದೇಶದಲ್ಲಿ ನಿವಾಸಿಸುವದಕ್ಕೆ ತಕ್ಕೊಂಡು ಹೋ ಗುವವು.