Zephaniah · chapter 2 · verse 1
Zephaniah 2:1 in Kannada
ಅಪೇಕ್ಷಿಸಲ್ಪಡದ ಓ ಜನಾಂಗವೇ ನೀವು ಒಟ್ಟಾಗಿ ಕೂಡಿಕೊಳ್ಳಿರಿ, ಹೌದು, ಒಟ್ಟಾಗಿ ಕೂಡಿಕೊಳ್ಳಿರಿ.
Apekshisalpadada o janaangave neevu ottaagi koodikolliri, haudu, ottaagi koodikolliri.
Zephaniah 2:1 in English
- King James Version (KJV)
- Gather yourselves together, yea, gather together, O nation not desired;
- World English Bible (WEB)
- Gather yourselves together, yes, gather together, you nation that has no shame,
- American Standard Version (ASV)
- Gather yourselves together, yea, gather together, O nation that hath no shame;
- Bible in Basic English (BBE)
- Come together, make everyone come together, O nation without shame;
- Darby Translation (DBY)
- Collect yourselves and gather together, O nation without shame,
- Webster's Bible (WBS)
- Assemble yourselves, yes, assemble, O nation not desired;
- Young's Literal Translation (YLT)
- Bend yourselves, yea, bend ye, O nation not desired,
Read in context
- 1ಅಪೇಕ್ಷಿಸಲ್ಪಡದ ಓ ಜನಾಂಗವೇ ನೀವು ಒಟ್ಟಾಗಿ ಕೂಡಿಕೊಳ್ಳಿರಿ, ಹೌದು, ಒಟ್ಟಾಗಿ ಕೂಡಿಕೊಳ್ಳಿರಿ.
- 2ನಿರ್ಣಯವು ಬರುವದಕ್ಕಿಂತ ಮುಂಚೆ ಯೂ ದಿನವು ಹೊಟ್ಟಿನಂತೆ ಹಾದುಹೋಗುವದಕ್ಕಿಂತ ಮುಂಚೆಯೂ ಕರ್ತನ ಕೋಪದ ದಿನವು ಉರಿದು ನಿಮ್ಮ ಮೇಲೆ ಬರುವದಕ್ಕಿಂತ ಮುಂಚೆಯೂ ಕೂಡಿ ಕೊಳ್ಳಿರಿ.
- 3ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.
Cross references
- Joel 1:14 ಯೋವೇಲ 1:14ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ; ಹಿರಿಯ ರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ದೇವರಾದ ಕರ್ತನ ಆಲಯದಲ್ಲಿ ಕೂಡಿಸಿ ಕರ್ತನಿಗೆ ಮೊರೆಯಿ ಡಿರಿ.
- 2 Chronicles 20:4 2 ಪೂರ್ವಕಾಲವೃತ್ತಾಂತ 20:4ಆದದರಿಂದ ಯೆಹೂದ ದವರು ಕರ್ತನನ್ನು ಹುಡುಕಲು ಕೂಡಿಕೊಂಡರು. ನಿಶ್ಚಯವಾಗಿ ಸಮಸ್ತ ಯೆಹೂದದ ಪಟ್ಟಣಗಳಿಂದ ಕರ್ತನನ್ನು ಹುಡುಕಲು ಬಂದರು.
- Nehemiah 8:1 ನೆಹೆಮೀಯ 8:1ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.
- Esther 4:16 ಎಸ್ತೇರಳು 4:16ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
- Nehemiah 9:1 ನೆಹೆಮೀಯ 9:1ಅದೇ ತಿಂಗಳಿನ ಇಪ್ಪತ್ತನಾಲ್ಕನೇ ದಿವಸದಲ್ಲಿ ಇಸ್ರಾಯೇಲ್ ಮಕ್ಕಳು ಉಪವಾಸ ಮಾಡಿ ಗೋಣೀತಟ್ಟನ್ನು ಉಟ್ಟುಕೊಂಡು ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.
- Zechariah 11:8 ಜೆಕರ್ಯ 11:8ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
- Jeremiah 3:3 ಯೆರೆಮೀಯ 3:3ಆದದರಿಂದ ಮಳೆ ನಿಂತು ಹೋಯಿತು, ಹಿಂಗಾರೂ ಆಗಲಿಲ್ಲ; ಸೂಳೆಯ ಹಣೆ ನಿನಗಿತ್ತು; ನಾಚುವದನ್ನು ನಿರಾಕರಿಸಿದಿ.
- Jeremiah 6:15 ಯೆರೆಮೀಯ 6:15ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.
- Matthew 18:20 ಮತ್ತಾಯನು 18:20ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
- Isaiah 26:8–9 ಯೆಶಾಯ 26:8–9ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ. ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
- Jeremiah 12:7–9 ಯೆರೆಮೀಯ 12:7–9ನನ್ನ ಮನೆಯನ್ನು ಬಿಟ್ಟಿದ್ದೇನೆ, ಸ್ವಾಸ್ತ್ಯವನ್ನು ತ್ಯಜಿಸಿದ್ದೇನೆ; ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ. ನನ್ನ ಸ್ವಾಸ್ತ್ಯವು ನನಗೆ ಅಡವಿಯಲ್ಲಿರುವ ಸಿಂಹದ ಹಾಗಾಯಿತು, ಅದು ನನಗೆ ವಿರೋಧವಾಗಿ ಕೂಗುತ್ತದೆ. ಆದದರಿಂದ ಅದನ್ನು ಹಗೆಮಾಡಿದ್ದೇನೆ. ನನ್ನ ಸ್ವಾಸ್ತ್ಯವು ನನಗೆ ಚಿತ್ರ ವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಪಕ್ಷಿಗಳು ಅದಕ್ಕೆ ವಿರೋಧವಾಗಿವೆ; ಬನ್ನಿ, ಹೊಲದ ಮೃಗಗಳ ನ್ನೆಲ್ಲಾ ಕೂಡಿಸಿರಿ, ತಿನ್ನುವದಕ್ಕೆ ಅವುಗಳನ್ನು ತನ್ನಿರಿ;
- Joel 2:12–18 ಯೋವೇಲ 2:12–18ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ. ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ. ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು? ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ. ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ. ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು? ಆಗ ಕರ್ತನು ತನ್ನ ದೇಶಕ್ಕೋಸ್ಕರ ರೋಷ ಗೊಂಡು ತನ್ನ ಜನರನ್ನು ಕನಿಕರಿಸುವನು.