Zephaniah · chapter 2 · verse 12
Zephaniah 2:12 in Kannada
ಕೂಷ್ಯರೇ, ನೀವೂ ಸಹ ನನ್ನ ಕತ್ತಿ ಯಿಂದ ಕೊಲ್ಲಲ್ಪಡುವಿರಿ;
Kooshyare, neevoo saha nanna katti yinda kollalpaduviri;
Zephaniah 2:12 in English
- King James Version (KJV)
- Ye Ethiopians also, ye [shall be] slain by my sword.
- World English Bible (WEB)
- You Cushites also, you will be killed by my sword.
- American Standard Version (ASV)
- Ye Ethiopians also, ye shall be slain by my sword.
- Bible in Basic English (BBE)
- And you Ethiopians will be put to death by my sword.
- Darby Translation (DBY)
- Ye Ethiopians also, ye shall be the slain of my sword.
- Webster's Bible (WBS)
- Ye Cushites also, ye [shall be] slain by my sword.
- Young's Literal Translation (YLT)
- Also ye, O Cushim, pierced of My sword [are] they.
Read in context
- 10ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವದು; ಅವರು ಸೈನ್ಯಗಳ ಕರ್ತನ ಜನರಿಗೆ ವಿರೋಧವಾಗಿ ನಿಂದಿಸಿ ತಮ್ಮನ್ನು ಹೆಚ್ಚಿಸಿಕೊಂಡ ದ್ದರಿಂದಲೇ
- 11ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.
- 12ಕೂಷ್ಯರೇ, ನೀವೂ ಸಹ ನನ್ನ ಕತ್ತಿ ಯಿಂದ ಕೊಲ್ಲಲ್ಪಡುವಿರಿ;
- 13ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು.
- 14ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
Cross references
- Ezekiel 30:4–9 ಯೆಹೆಜ್ಕೇಲನು 30:4–9ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು. ಐಥಿಯೋಪ್ಯ, ಲಿಬಿಯ ಮತ್ತು ಲಿಡಿಯ ಎಲ್ಲಾ ಮಿಶ್ರಜನರೂ ಕೂಬ್ಯರೂ ಮಿತ್ರರಾಜ್ಯ ದವರೂ ಅವರ ಸಂಗಡ ಕತ್ತಿಯಿಂದ ಹತರಾಗುವರು. ಕರ್ತನು ಹೀಗೆ ಹೇಳುತ್ತಾನೆ--ಐಗುಪ್ತಕ್ಕೆ ಆಧಾರ ವಾದವರು ಬೀಳುವರು. ಅದರ ಶಕ್ತಿಯ ಮದವು ಇಳಿದು ಹೋಗುವದು. ಅಲ್ಲಿನ ಜನರು ಮಿಗ್ದೋಲಿ ನಿಂದ ಸೆವೇನೆಯ ಗೋಪುರ ಮೊದಲುಗೊಂಡು ಅವರಲ್ಲಿ ಕತ್ತಿಯಿಂದ ಹತರಾಗುವರು ಎಂದು ದೇವ ರಾದ ಕರ್ತನು ಹೇಳುತ್ತಾನೆ. ಆಗ ಅವರು ಹಾಳಾಗಿರುವ ದೇಶಗಳೊಳಗೆ ಹಾಳಾಗುವರು. ಅದರ ಪಟ್ಟಣ ಗಳು ಹಾಳಾದ ಪಟ್ಟಗಳ ಮಧ್ಯದಲ್ಲಿ ಇರುವವು. ನಾನು ಐಗುಪ್ತದಲ್ಲಿ ಬೆಂಕಿಯಿಟ್ಟಾಗ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಕರ್ತನೆಂದು ತಿಳಿಯುವದು. ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣ ಮಾಡಿ ನಿಶ್ಚಿಂತರಾದ ಐಥಿಯೋಪ್ಯರನ್ನು ಹೆದರಿಸುವರು; ಐಗುಪ್ತದ ದಿನದಲ್ಲಿ ಆದಹಾಗೆ ಅವರ ಮೇಲೆ ದೊಡ್ಡಬಾಧೆ ಉಂಟಾಗುವದು; ಇಗೋ, ಅದು ಬಂತು.
- Jeremiah 51:20–23 ಯೆರೆಮೀಯ 51:20–23ನೀನು ನನ್ನ ಸುತ್ತಿಗೆಯೇ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ; ನಿನ್ನಿಂದ ಕುದುರೆಯನ್ನೂ ಅದರ ಮೇಲೆ ಹತ್ತಿದವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಥವನ್ನೂ ಅದರಲ್ಲಿ ಸವಾರಿ ಮಾಡುವವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಗಂಡಸರನ್ನೂ ಹೆಂಗಸರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ.
- Isaiah 13:5 ಯೆಶಾಯ 13:5ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
- Isaiah 18:1–7 ಯೆಶಾಯ 18:1–7ಓ ಐಥಿಯೋಪಿಯ ನದಿಗಳ ಆಚೆಯಲ್ಲಿರುವ ರೆಕ್ಕೆಗಳು ಪಟಪಟನೆ ಆಡುವ ನಾಡೇ, ಅಯ್ಯೋ! ಸಮುದ್ರ ಮಾರ್ಗದಿಂದಲೂ ಹಾ! ಆಪಿನ ದೋಣಿಗಳಲ್ಲಿ ನೀರಿನ ಮೇಲೆಯೂ ರಾಯಭಾರಿ ಗಳನ್ನು ಕಳುಹಿಸುವಂತಾದ್ದೇ! ಆಶ್ಚರ್ಯ ತೀವ್ರವಾದ ದೂತರೇ, ಚದುರಿಸಲ್ಪಟ್ಟಿರುವ ಮತ್ತು ಸೂರೆಯಾಗಿ ರುವ ಜನಾಂಗದವರ ಬಳಿಗೂ ಹುಟ್ಟಿದಂದಿನಿಂದ ಇಲ್ಲಿನ ವರೆಗೂ ಭಯಂಕರವಾದ ಜನರ ಬಳಿಗೂ ಮಹಾಬಲದಿಂದ ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ಜನಾಂಗದ ಬಳಿಗೂ ಹೋಗಿರಿ. ಭೂಲೋಕದ ನಿವಾಸಿಗಳೆಲ್ಲರೇ! ಭೂಮಿಯಲ್ಲಿ ವಾಸ ವಾಗಿರುವವರೆಲ್ಲರೇ! ಬೆಟ್ಟಗಳಲ್ಲಿ ಆತನು ಧ್ವಜವನ್ನು ಎತ್ತುವಾಗ ನೋಡಿರಿ; ಅವನು ತುತೂರಿಯನ್ನೂದು ವಾಗ ಕೇಳಿರಿ. ಕರ್ತನು ನನಗೆ--ನಾನು ವಿಶ್ರಾಂತಿ ಯನ್ನು ತೆಗೆದುಕೊಳ್ಳುವೆನು. ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು ಎಂದು ಹೇಳಿದನು. ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷೇ ಕಾಯಿಯಾಗುವಾಗ ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕು ವನು. ಅವೆಲ್ಲ ಬೆಟ್ಟಗಳ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಬಿಡಲ್ಪಡುವವು; ಪಕ್ಷಿಗಳು ಅವುಗಳ ಮೇಲೆ ಬೇಸಿಗೆಯನ್ನು ಭೂಮಿಯ ಎಲ್ಲಾ ಮೃಗಗಳು ಅವುಗಳ ಮೇಲೆ ಚಳಿಗಾಲವನ್ನು ಕಳೆಯುವವು.ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು. ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
- Isaiah 43:3 ಯೆಶಾಯ 43:3ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.
- Isaiah 20:4–5 ಯೆಶಾಯ 20:4–5ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು. ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
- Jeremiah 46:9–10 ಯೆರೆಮೀಯ 46:9–10ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ. ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ.
- Isaiah 10:5 ಯೆಶಾಯ 10:5ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ.
- Jeremiah 47:6–7 ಯೆರೆಮೀಯ 47:6–7ಕರ್ತನ ಕತ್ತಿಯೇ, ಎಷ್ಟರ ವರೆಗೆ ವಿಶ್ರಮಿಸಿಕೊಳ್ಳದೆ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ! ವಿಶ್ರಮಿಸಿಕೋ, ಸುಮ್ಮನಿರು.ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ. ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
- Psalm 17:13 ಕೀರ್ತನೆಗಳು 17:13ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.