Zephaniah · chapter 2 · verse 13
Zephaniah 2:13 in Kannada
ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು.
Aatanu tanna kaiyannu uttarada mele chaachi ashshoorannu naashamaadi nineveyannu haalaagiyoo aranyadante onagi ddaagiyoo maaduvanu.
Zephaniah 2:13 in English
- King James Version (KJV)
- And he will stretch out his hand against the north, and destroy Assyria; and will make Nineveh a desolation, [and] dry like a wilderness.
- World English Bible (WEB)
- He will stretch out his hand against the north, destroy Assyria, and will make Nineveh a desolation, as dry as the wilderness.
- American Standard Version (ASV)
- And he will stretch out his hand against the north, and destroy Assyria, and will make Nineveh a desolation, and dry like the wilderness.
- Bible in Basic English (BBE)
- And his hand will be stretched out against the north, for the destruction of Assyria; and he will make Nineveh unpeopled and dry like the waste land.
- Darby Translation (DBY)
- And he will stretch out his hand against the north, and destroy Assyria; and will make Nineveh a desolation, a place of drought like the wilderness.
- Webster's Bible (WBS)
- And he will stretch out his hand against the north, and destroy Assyria; and will make Nineveh a desolation, [and] dry like a wilderness.
- Young's Literal Translation (YLT)
- And He stretcheth His hand against the north, And doth destroy Asshur, And he setteth Nineveh for a desolation, A dry land like a wilderness.
Read in context
- 11ಕರ್ತನು ಅವರಿಗೆ ಭಯಂಕರನಾಗಿ ರುವನು. ಆತನು ಭೂಮಿಯ ಎಲ್ಲಾ ದೇವರುಗಳನ್ನು ಕ್ಷೀಣಮಾಡುವನು; ಅನ್ಯಜನಾಂಗಗಳ ದ್ವೀಪಗಳವ ರೆಲ್ಲರು ತಮ್ಮ ತಮ್ಮ ಸ್ಥಳಗಳಿಂದ ಆತನನ್ನು ಆರಾ ಧಿಸುವರು.
- 12ಕೂಷ್ಯರೇ, ನೀವೂ ಸಹ ನನ್ನ ಕತ್ತಿ ಯಿಂದ ಕೊಲ್ಲಲ್ಪಡುವಿರಿ;
- 13ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು.
- 14ಅದರ ಮಧ್ಯದಲ್ಲಿ ಮಂದೆಗಳೂ ಜನಾಂಗಗಳ ಮೃಗಗಳೆಲ್ಲವೂ ಮಲಗುವವು; ಬಕಪಕ್ಷಿಯೂ ಮುಳ್ಳು ಹಂದಿಯೂ ಅದರ ಮೇಲಿನ ಅವುಗಳ ಹಾಸುಗಳಲ್ಲಿ ಇಳುಕೊಳ್ಳುವವು; ಕಿಟಕಿಗಳಲ್ಲಿ ಹಾಡುವ ಶಬ್ದವಿರುವದು; ಹೊಸ್ತಿಲಗಳಲ್ಲಿ ಹಾಳು ಇರುವದು; ದೇವದಾ ರಿನ ಕೆಲಸವನ್ನು ಬೈಲುಮಾಡುವನು.ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
- 15ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
Cross references
- Nahum 3:7 ನಹೂಮ 3:7ಆಗ ಆಗುವದೇನಂದರೆ, ನಿನ್ನನ್ನು ನೋಡುವವ ರೆಲ್ಲರೂ ನಿನ್ನಿಂದ ಓಡಿಹೋಗಿ ನಿನೆವೆ ಹಾಳಾಯಿತು; ಅದಕ್ಕೆ ಯಾರು ಚಿಂತೆಪಡುವರು, ನಿನಗಾಗಿ ಆದರಿ ಸುವವರನ್ನು ನಾನು ಎಲ್ಲಿಂದ ಹುಡುಕಲಿ ಎಂದು ಹೇಳುವರು.
- Nahum 1:1 ನಹೂಮ 1:1ನಿನೆವೆಯ ಭಾರವು. ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.
- Isaiah 10:12 ಯೆಶಾಯ 10:12ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು.
- Nahum 3:18–19 ನಹೂಮ 3:18–19ಅಶ್ಶೂರ್ಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ, ನಿನ್ನ ಶ್ರೇಷ್ಠರು ಧೂಳಿನಲ್ಲಿ ಬಿದ್ದಿದ್ದಾರೆ; ನಿನ್ನ ಜನರು ಬೆಟ್ಟಗಳಲ್ಲಿ ಚದರಿ ಹೋಗಿ ದ್ದಾರೆ; ಕೂಡಿಸುವವರು ಯಾರೂ ಇಲ್ಲ.ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು? ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
- Isaiah 10:16 ಯೆಶಾಯ 10:16ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.
- Micah 5:6 ಮೀಕ 5:6ಅವರು ಅಶ್ಶೂರಿನ ದೇಶವನ್ನು ಕತ್ತಿಯಿಂದಲೂ ನಿಮ್ರೋದನ ದೇಶವನ್ನು ಅದರ ಪ್ರವೇಶಗಳಲ್ಲಿಯೂ ಹಾಳುಮಾಡುವರು; ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರಾಂತ್ಯಗಳಲ್ಲಿ ತುಳಿಯುವಾಗ ಆತನು ನಮ್ಮನ್ನು ತಪ್ಪಿಸುವನು.
- Nahum 3:15 ನಹೂಮ 3:15ಅಲ್ಲೇ ಬೆಂಕಿ ನಿನ್ನನ್ನು ನುಂಗುವದು; ಕತ್ತಿಯು ನಿನ್ನನ್ನು ಕಡಿದುಬಿಡುವದು; ನಾಶಕ ಹುಳದಂತೆ ಅದು ನಿನ್ನನ್ನು ತಿಂದುಬಿಡುವದು; ನಾಶಕ ಹುಳದಂತೆ ಬಹು ಮಂದಿಯಾಗು; ಮಿಡತೆಗಳಂತೆ ಬಹು ಮಂದಿಯಾಗು.
- Zechariah 10:10–11 ಜೆಕರ್ಯ 10:10–11ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು. ಅವನು ಸಮುದ್ರವನ್ನು ಬಾಧೆಯಿಂದ ದಾಟುವನು; ಸಮುದ್ರದಲ್ಲಿ ತೆರೆಗಳನ್ನು ಬಡಿಯು ವನು; ನದಿಯ ಅಗಾಧಗಳೆಲ್ಲಾ ಒಣಗುವವು; ಅಶ್ಯೂರಿನ ಗರ್ವವು ತಗ್ಗಿಸಲ್ಪಡುವದು; ಐಗುಪ್ತದ ಮುದ್ರೆಕೋಲು ಹೋಗಿಬಿಡುವದು.ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
- Ezekiel 31:3–18 ಯೆಹೆಜ್ಕೇಲನು 31:3–18ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು. ನೀರು ಅದನ್ನು ಬೆಳೆಸಿತು, ಅಗಾಧವು ತನ್ನ ನದಿಗಳನ್ನು ಅದರ ಸುತ್ತಲೂ ಹರಿಸಿ ತನ್ನ ಕಾಲುವೆಗಳನ್ನು ಬಯಲಿನ ಮರಗಳಿಗೆಲ್ಲಾ ಕಳುಹಿಸಿ, ಅದನ್ನು ಎತ್ತರವಾಗಿ ಬೆಳೆಯುವಂತೆ ಮಾಡಿತು. ಆದ ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರ ಗಳಿಗಿಂತ ಎತ್ತರವಾಗಿತ್ತು; ಅದು ಹಬ್ಬಿದ್ದದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು. ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು. ಹೀಗೆ ಅವನು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ಕೊಂಬೆಗಳ ಉದ್ದದಲ್ಲಿ ಸುಂದರವಾಗಿದ್ದನು; ಯಾಕಂದರೆ ಅವನ ಬೇರು ಮಹಾ ನೀರಿನಿಂದಾಗಿತ್ತು. ದೇವರ ತೋಟದ ದೇವದಾರುಗಳು ಅವನನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅವನ ಕೊಂಬೆಗಳಿಗೆ ಸಮ ವಾಗಲಿಲ್ಲ; ಆಲದ ಮರಗಳು ಅವನ ರೆಂಬೆಗಳಷ್ಟೂ ಇಲ್ಲ; ಆ ದೇವರ ತೋಟದ ಯಾವುದೇ ಮರವು ಇವನ ಸೌಂದರ್ಯಕ್ಕೆ ಸಮವಾಗಲಿಲ್ಲ. ನಾನು ಅವನನ್ನು ಅವನ ಕೊಂಬೆಗಳ ಸಮೂಹದಿಂದ ಸೌಂದರ್ಯಪಡಿಸಿದೆನು; ಅದರಿಂದ ದೇವರ ತೋಟ ದಲ್ಲಿನ ಏದೆನಿನ ಮರಗಳೆಲ್ಲಾ ಅವನ ಮೇಲೆ ಹೊಟ್ಟೇ ಕಿಚ್ಚುಪಟ್ಟವು. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಯಾಕಂದರೆ ನೀನು ನೀಳದಲ್ಲಿ ಎತ್ತರವಾಗಿ ಅವನು ತನ್ನ ತಲೆಯನ್ನು ಒತ್ತಿಕೊಂಡಿರುವ ಕೊಂಬೆಗಳ ಕಡೆಗೆ ಚಾಚಿದ ಕಾರಣದಿಂದ ಅವನ ಹೃದಯವು ತನ್ನ ಎತ್ತರದಲ್ಲಿ ಹೆಚ್ಚಿಸಲ್ಪಟ್ಟಿದೆ. ಆದದರಿಂದ ನಾನು ಅವನನ್ನು ಅನ್ಯಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಒಪ್ಪಿಸಿದ್ದೇನೆ; ಇವನು ನಿಶ್ಚಯವಾಗಿ ಅವನನ್ನು ದಂಡಿಸುತ್ತಾನೆ. ಅವನ ದುಷ್ಟತ್ವದ ನಿಮಿತ್ತ ನಾನು ಅವನನ್ನು ತಳ್ಳಿಹಾಕಿದ್ದೇನೆ. ಜನಾಂಗಗಳಲ್ಲಿ ಭಯಂಕರವಾದ ಅಪರಿಚಿತರು ಅವನನ್ನು ಕಡಿದುಹಾಕು ವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅವನ ಕೊಂಬೆಗಳು ಬೀಳುವವು, ದೇಶದ ಹಳ್ಳಗಳ ಲ್ಲೆಲ್ಲಾ ಅವನ ರೆಂಬೆಗಳು ಮುರಿದುಹೋಗುವವು; ಭೂಮಿಯ ಜನಗಳೆಲ್ಲಾ ಅವನ ನೆರಳಿನಿಂದ ದೂರ ಸರಿದು ಅವನನ್ನು ಬಿಟ್ಟುಬಿಡುವರು. ಅವನ ಬುಡದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವವು; ಬಯಲಿನ ಎಲ್ಲಾ ಪ್ರಾಣಿಗಳು ಅವನ ರೆಂಬೆಗಳ ಬಳಿಯಲ್ಲಿರುವವು; ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗಲಿಸದೆ ಇರುವದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವವು; ಅವುಗಳಿಗೆ ಅಧೋ ಲೋಕವೇ ಗತಿಯಾಗುವದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವವು. ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅವನು ಸಮಾಧಿಗೆ ಇಳಿದ ದಿನದಲ್ಲಿ ಗೋಳಾಟ ಹುಟ್ಟಿಸುವೆನು, ಅವನಿಗಾಗಿ ನಾನು ಅಗಾಧವನ್ನು ಮುಚ್ಚುವೆನು; ನಾನು ಅದರ ಪ್ರವಾಹವನ್ನು ತಡೆಹಿಡಿಯುವೆನು; ಮಹಾ ಜಲವು ನಿಲ್ಲಿಸಲ್ಪಡುವವು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಾಡಿಸುವೆನು. ಬಯಲಿನ ಮರಗಳೆಲ್ಲಾ ಅವನಿಗೋಸ್ಕರ ಕುಗ್ಗಿಹೋಗುವವು. ನಾನು ಅದನ್ನು ಕುಣಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಅಧೋ ಲೋಕಕ್ಕೆ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿ ಕೊಂಡವು. ಅವರು ಕೂಡ ಅನ್ಯಜನಾಂಗಗಳೊಳಗೆ ಅವನ ನೆರಳಿನಲ್ಲಿ ಕುಳಿತುಕೊಳ್ಳುವರು; ಅವನ ಕೈಗಳು ಸಹ ಅವನ ಸಂಗಡವೇ ಪಾತಾಳಕ್ಕೆ ಕತ್ತಿಯಿಂದ ಹತವಾದವರ ಬಳಿಗೆ ಇಳಿದುಹೋಗುವವು;ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ. ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆ ಯಿಂದಲೂ ಏದೆನಿನ ಯಾವ ಮರಗಳಿಗೆ ಸಮ ನಾಗಿರುವೆ? ಆದರೂ ಏದೆನಿನ ಮರಗಳ ಸಂಗಡ ಕೆಳಗಿನ ಸೀಮೆಗಳಿಗೆ ಇಳಿಸಲ್ಪಡುವಿ; ಸುನ್ನತಿಯಿಲ್ಲದವರ ಮಧ್ಯದಲ್ಲಿ ಕತ್ತಿಯಿಂದ ಹತವಾದವರ ಸಂಗಡ ಮಲ ಗುವಿ. ಇದೇ ಫರೋಹನನೂ ಅವನ ಎಲ್ಲಾ ಜನ ಸಮೂಹವೂ ಆಗಿವೆ ಎಂದು ದೇವರಾದ ಕರ್ತನು ಹೇಳುತ್ತಾನೆ.
- Nahum 2:10–11 ನಹೂಮ 2:10–11ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ. ಸಿಂಹದ ಗವಿಯೂ ಎಳೇ ಸಿಂಹಗಳು ಮೇಯುವ ಸ್ಥಳವು ಎಲ್ಲಿ? ಅಲ್ಲಿ ಮುದಿಸಿಂಹ, ಸಿಂಹಿಣಿ ಸಿಂಹದ ಮರಿಗಳು ನಡೆದಾಡಿದರೂ ಯಾರೂ ಹೆದರಿ ಸಲಿಲ್ಲವಲ್ಲಾ?
- Isaiah 11:11 ಯೆಶಾಯ 11:11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
- Psalm 83:8–9 ಕೀರ್ತನೆಗಳು 83:8–9ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ. ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು.