Zephaniah · chapter 3 · verse 1
Zephaniah 3:1 in Kannada
ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ!
Asahyavaada, mailigeyaada, shramepadisuva pattanakke ayyo!
Zephaniah 3:1 in English
- King James Version (KJV)
- Woe to her that is filthy and polluted, to the oppressing city!
- World English Bible (WEB)
- Woe to her who is rebellious and polluted, the oppressing city!
- American Standard Version (ASV)
- Woe to her that is rebellious and polluted! to the oppressing city!
- Bible in Basic English (BBE)
- Sorrow to her who is uncontrolled and unclean, the cruel town!
- Darby Translation (DBY)
- Woe to her that is rebellious and corrupted, to the oppressing city!
- Webster's Bible (WBS)
- Woe to her that is filthy and polluted, to the oppressing city!
- Young's Literal Translation (YLT)
- Woe [to] the rebellious and polluted, The oppressing city!
Read in context
- 1ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಅಯ್ಯೋ!
- 2ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ.
- 3ಅದರ ಮಧ್ಯದಲ್ಲಿರುವ ಪ್ರಧಾನರುಗಳು ಗರ್ಜಿಸುವ ಸಿಂಹಗಳಾಗಿದ್ದಾರೆ; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳಾಗಿದ್ದಾರೆ; ಮರುದಿನದ ವರೆಗೂ ಕಡಿಯುವದಕ್ಕೆ ಎಲುಬುಗಳಿಲ್ಲ.
Cross references
- Jeremiah 6:6 ಯೆರೆಮೀಯ 6:6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
- Isaiah 59:13 ಯೆಶಾಯ 59:13ದ್ರೋಹ ಮಾಡಿ ದ್ದೇವೆ, ಕರ್ತನಿಗೆ ಸುಳ್ಳಾಡಿದ್ದೇವೆ; ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ; ಬಲಾತ್ಕಾರದಿಂದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತಾಡಿದ್ದೇವೆ; ಹೃದಯದಲ್ಲಿ ಸುಳ್ಳು ಮಾತುಗಳನ್ನು ಕಲ್ಪಿಸಿಕೊಂಡು ನುಡಿದಿದ್ದೇವೆ.
- Isaiah 30:12 ಯೆಶಾಯ 30:12ಆದಕಾರಣ ಇಸ್ರಾಯೇಲ್ಯರ ಪರಿ ಶುದ್ಧನು ಹೇಳುವದೇನಂದರೆ--
- Malachi 3:5 ಮಲಾಕಿಯ 3:5ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Ezekiel 22:7 ಯೆಹೆಜ್ಕೇಲನು 22:7ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.
- Zechariah 7:10 ಜೆಕರ್ಯ 7:10ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು.
- Micah 2:2 ಮೀಕ 2:2ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
- Leviticus 1:16 ಯಾಜಕಕಾಂಡ 1:16ಇದಲ್ಲದೆ ಅವನು ಅದರ ರೆಕ್ಕೆ (ಪುಕ್ಕ)ಗಳೊಂದಿಗೆ ಕರುಳುಗಳನ್ನೂ ಕಿತ್ತು ಯಜ್ಞವೇದಿಯ ಬಳಿ ಪೂರ್ವಭಾಗದಲ್ಲಿ ಬೂದಿ ಯಿರುವ ಸ್ಥಳದಲ್ಲಿ ಬಿಸಾಡಬೇಕು.ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು, ಆದರೆ ಬೇರೆಬೇರೆ ಯಾಗಿ ವಿಭಾಗಿಸಬಾರದು; ಆಗ ಯಾಜಕನು ಅದನ್ನು ಯಜ್ಞವೇದಿಯ ಬೆಂಕಿಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಹಾಗೆಯೂ ಕರ್ತನಿಗೆ ಸುವಾಸನೆಯಾಗುವಂತೆಯೂ ಸುಡಬೇಕು.
- Isaiah 5:7 ಯೆಶಾಯ 5:7ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.
- Jeremiah 22:17 ಯೆರೆಮೀಯ 22:17ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
- Ezekiel 22:29 ಯೆಹೆಜ್ಕೇಲನು 22:29ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ.
- Amos 4:1 ಆಮೋಸ 4:1ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.