Zephaniah · chapter 3 · verse 12
Zephaniah 3:12 in Kannada
ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.
Idallade ninna madhyadalli badavarannoo heenavaadavarannoo ulisuvenu; ivaru kartana hesarinalli nambike iduvaru.
Zephaniah 3:12 in English
- King James Version (KJV)
- I will also leave in the midst of thee an afflicted and poor people, and they shall trust in the name of the LORD.
- World English Bible (WEB)
- But I will leave among you an afflicted and poor people, and they will take refuge in the LORD’s name.
- American Standard Version (ASV)
- But I will leave in the midst of thee an afflicted and poor people, and they shall take refuge in the name of Jehovah.
- Bible in Basic English (BBE)
- But I will still have among you a quiet and poor people, and they will put their faith in the name of the Lord.
- Darby Translation (DBY)
- And I will leave in the midst of thee an afflicted and poor people, and they shall trust in the name of Jehovah.
- Webster's Bible (WBS)
- I will also leave in the midst of thee an afflicted and poor people, and they shall trust in the name of the LORD.
- Young's Literal Translation (YLT)
- And I have left in thy midst a people humble and poor, And they have trusted in the name of Jehovah.
Read in context
- 10ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿ ಹೋದವರ ನನ್ನ ಮಗಳೂ ನನ್ನ ಕಾಣಿಕೆಯನ್ನು ತರುವರು.
- 11ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
- 12ಇದಲ್ಲದೆ ನಿನ್ನ ಮಧ್ಯದಲ್ಲಿ ಬಡವರನ್ನೂ ಹೀನವಾದವರನ್ನೂ ಉಳಿಸುವೆನು; ಇವರು ಕರ್ತನ ಹೆಸರಿನಲ್ಲಿ ನಂಬಿಕೆ ಇಡುವರು.
- 13ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.
- 14ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು.
Cross references
- Isaiah 14:32 ಯೆಶಾಯ 14:32ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
- Nahum 1:7 ನಹೂಮ 1:7ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.
- Isaiah 61:1–3 ಯೆಶಾಯ 61:1–3ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Zechariah 13:8–9 ಜೆಕರ್ಯ 13:8–9ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ. ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Matthew 5:3 ಮತ್ತಾಯನು 5:3ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
- Isaiah 50:10 ಯೆಶಾಯ 50:10ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Matthew 11:5 ಮತ್ತಾಯನು 11:5ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- Ephesians 1:12–13 ಎಫೆಸದವರಿಗೆ 1:12–13ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು. ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
- Psalm 37:40 ಕೀರ್ತನೆಗಳು 37:40ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
- Zechariah 11:11 ಜೆಕರ್ಯ 11:11ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.
- Matthew 12:21 ಮತ್ತಾಯನು 12:21ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.